ಹಾಸನ : ಈಜಲು ಹೋಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲೂಕು ಉಂಡಿಗನಾಳು ಗ್ರಾಮದಲ್ಲಿ ನಡೆದಿದೆ.
ಹೌದು .. ನಿನ್ನೆ ಶಾಲೆಗೆ ರಜೆ ಇದ್ದಿದ್ದರಿಂದ ಕೆರೆ ಕೊಡಿ ಬಿದ್ದಿರುವ ಕಾರಣ ಈಜಲು ಹೋಗಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಉಂಡಿಗನಾಳು ಗ್ರಾಮದ ನಿವಾಸಿಗಳಾದ ಸೃಜನ್ (12) ವಿಜಯ್ ( 13 ) ಮೃತ ದುರ್ಧೈವಿಗಳು.
ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸಹಕಾರದಿಂದ ಮಕ್ಕಳ ಮೃತದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
