Monday, March 30, 2026
Homeಜಿಲ್ಲಾಸುದ್ದಿಬಾಂಗ್ಲಾ ಮೇಲೆ ಅಶ್ವಿನ್‌ ಪ್ರಹಾರ - ಭರ್ಜರಿ ಗೆಲುವು ದಾಖಲಿಸಿದ ಟೀಂ ಇಂಡಿಯಾ

ಬಾಂಗ್ಲಾ ಮೇಲೆ ಅಶ್ವಿನ್‌ ಪ್ರಹಾರ – ಭರ್ಜರಿ ಗೆಲುವು ದಾಖಲಿಸಿದ ಟೀಂ ಇಂಡಿಯಾ

ಚೆನ್ನೈ : ರವಿಚಂದ್ರನ್ ಅಶ್ವಿನ್ ಬೊಂಬಾಟ್‌ ಪ್ರದರ್ಶನದ ಪರಿಣಾಮ ಬಾಂಗ್ಲಾ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ಕ್ರಿಕೆಟ್‌ ತಂಡ 280 ರನ್‌ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.


ಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡ ಮೇಲ್‌ ಕ್ರಮಾಂಕದ ಆಟಗಾರರನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಆಕರ್ಷಕ ಶತಕ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದ 6 ವಿಕೆಟ್ ಕಬಳಿಸಿ ಮತ್ತೊಮ್ಮೆ ಬಾಂಗ್ಲಾ ಮೇಲೆ ಪ್ರಹಾರ ನಡೆಸಿದರು. ಆ ಮೂಲಕ ರವಿಚಂದ್ರನ್ ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 515 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 234 ರನ್‌ಗಳಿಗೆ ಸರ್ವಪತನ ಕಂಡಿದೆ
ಗೆಲ್ಲಲು 515 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು ಮೂರನೇ ದಿನದಾಟದಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತ್ತು. ನಾಲ್ಕನೇ ದಿನದಾಟದ ಮೊದಲ ಸೆಷನ್‌ನಲ್ಲಿಯೇ ಬಾಂಗ್ಲಾದ ಆರು ಬ್ಯಾಟರ್‌ಗಳನ್ನು ಪೆವಿಲಿಯನ್ನಿಗಟ್ಟುವಲ್ಲಿ ಅಶ್ವಿನ್ ಹಾಗೂ ಜಡೇಜಾ ಜೋಡಿ ಯಶಸ್ವಿಯಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!