Wednesday, October 21, 2026
Homeಜಿಲ್ಲಾಸುದ್ದಿಸಾಂಪ್ರದಾಯಿಕ ಉಡುಗೆ ತೊಟ್ಟು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ!

ಸಾಂಪ್ರದಾಯಿಕ ಉಡುಗೆ ತೊಟ್ಟು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ!

Telegram Group
Join Now

ಮೂಡಿಗೆರೆ: ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಹಬ್ಬವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ದಸರಾ ಹಾಗೂ ನವರಾತ್ರಿ ಹಬ್ಬ ದ ಅಂಗವಾಗಿ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದಿನನಿತ್ಯದ ಖಾಕಿ ಸಮವಸ್ತ್ರದ ಬದಲಾಗಿ ಸಾಂಪ್ರದಾಯಿಕ ಉಡುಗೆ ತೊಟ್ಟು ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು

ವೃತ್ತ ನಿರಿಕ್ಷರಾದ ರಾಜಶೇಖರ್ ಹಾಗೂ ಠಾಣಾಧಿಕಾರಿ ಹರ್ಷವರ್ಧನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಠಾಣೆಯ ಎಲ್ಲ ಸಿಬ್ಬಂದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ವಾಹನಗಳು ಹಾಗೂ ಆಯುಧಗಳನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸುವುದರ ಮೂಲಕ ಪೊಲೀಸ್ ಸಿಬ್ಬಂದಿಗಳು ಒಂದೇ ಕುಟುಂಬ ಎಂಬ ಸಂದೇಶ ಸಾರಲಾಯಿತು.

ವಿಶೇಷವಾಗಿ ಸಿಬ್ಬಂದಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮದಿಂದ ಆಯುಧ ಪೂಜೆಯಲ್ಲಿ ಪಾಲ್ಗೊಂಡರು. ಠಾಣೆಯ ಆವರಣದಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!