ಬಾಳೆಹೊನ್ನೂರು: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಬಂಧಿಸಿದ್ದಾರೆ.

ಬಿ.ಕಣಬೂರು ಗ್ರಾಮದ ವಾಟುಕುಡಿಗೆ ಬಸ್ ನಿಲ್ದಾಣದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಸಂತೋಷ (35), ಇರ್ಶಾದ್ (26), ಇಮ್ರಾನ್ ಶರೀಫ್ (26), ಇಬ್ರಾಹಿಂ (37) ಬಂಧಿತ ಆರೋಪಿಗಳಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸ್ ಠಾಣಾ ಪಿ.ಎಸ್.ಐ ರವೀಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಆಂದ್ರಪ್ರದೇಶದ ವೈಜಾಕ್ ನಿಂದ ಗಾಂಜಾ ತರಿಸಿ ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಭಾಗದಲ್ಲಿ ಪಾರ್ಸೆಲ್ ಮಾಡುತ್ತಿದ್ದರು ಎನ್ನಲಾಗಿದೆ.
ಇನ್ನು ಬಂಧಿತ ಆರೋಪಿಗಳಿಂದ ಸುಮಾರು 15,000 ಬೆಲೆ ಬಾಳುವ 680.00 ಗ್ರಾಂ ತೂಕದ ಗಾಂಜಾ ಸೊಪ್ಪನ್ನು ವಶಪಡಿಸಿಕೊಳ್ಳಲಾಗಿದೆ.