ಬಾಳೆಹೊನ್ನೂರು: ಅಗತ್ಯವಿದ್ದಾಗ ಪ್ರಯಾಣಿಕರು ಹೆಚ್ಚಾಗಿ ಬಸ್ ನಿಲ್ದಾಣಗಳು ಅಥವಾ ರೈಲ್ವೇ ನಿಲ್ದಾಣಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಬಳಸಬೇಕಾಗುತ್ತದೆ. ಆದರೆ ಇಲ್ಲಿನ ಬಸ್ ನಿಲ್ದಾಣದಲ್ಲಿ ಮಹಿಳಾ ಶೌಚಾಲಯದಲ್ಲಿ ಮಹಿಳೆಯರಿಗೆ ತಿಳಿಯದಂತೆ ಮೊಬೈಲ್ ಫೋನ್ ಮೂಲಕ ಗೌಪ್ಯವಾಗಿ ಚಿತ್ರೀಕರಣ ಮಾಡಲು ಯತ್ನಿಸಿದ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು .. ಬಾಳೆಹೊನ್ನೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಶೌಚಾಲಯಕ್ಕೆ ತೆರಳಿದ್ದರು ಈ ವೇಳೆ ಶೌಚಾಲಯದ ಸಿಬ್ಬಂದಿ ಮೊಬೈಲ್ ಫೋನ್ ಮೂಲಕ ಗೋಪ್ಯವಾಗಿ ಚಿತ್ರೀಕರಣ ಮಾಡುತ್ತಿರುವುದನ್ನು ಅವರು ಗಮನಿಸಿ ತಕ್ಷಣ ಬಾಳೆಹೊನ್ನೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ ಎಚ್ಚೆತ್ತಗೊಂಡ ಪೊಲೀಸರು ಅವನ್ನು ಲಾಕ್ ಮಾಡಿ ಮೊಬೈಲ್ ಫೋನ್ ಪರಿಶೀಲನೆ ಮಾಡಿದಾಗ ಸತ್ಯ ಹೊರಬಂದಿದೆ.
ಬಂಧಿತ ಆರೋಪಿ ಬಿಹಾರ ಮೂಲದ ರೋಶನ್ ಕುಮಾರ್ ಎಂದು ಗುರುತಿಸಲಾಗಿದ್ದು ಬಾಳೆಹೊನ್ನೂರು ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಬಳಿಕ ಆರೋಪಿಯನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಹೊಸ ಸಿಬ್ಬಂದಿಯನ್ನು ನೇಮಿಸಲಾಗಿದೆ.
