ಚಿಕ್ಕಮಗಳೂರು: ಬಾಳೆಹೊನ್ನೂರು ಸಮೀಪದ ಅರಳಿಕೊಪ್ಪ ಮತ್ತು ತುಪ್ಪೂರಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಪೂರ್ಣೇಶ ಎಂಬುವರ ತೋಟಕ್ಕೆ ನುಗ್ಗಿ ಫಸಲಿಗೆ ಬಂದಿದ್ದ ನೂರಾರು ಅಡಕೆ ಮರಗಳನ್ನು ಸೀಳಿ ಹಾಕಿದೆ.
ಇನ್ನೂ ತುಪ್ಪೂರಿನಲ್ಲಿ ನಾಟಿ ಮಾಡಿದ ತುಳಿದು ಹಾಕಿದ್ದು ರೈತರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಈ ಕುರಿತು ಶೃಂಗೇರಿ ಶಾಸಕರಾದ ಟಿ.ಡಿ ರಾಜೇಗೌಡ ಅವರು ಇವರ ಜೊತೆ ದೂರವಾಣಿ ಮೂಲಕ ಮಾತನಾಡಿ ಆನೇ ಓಡಿಸುವ ಬಗ್ಗೆ ಹಾಗೂ ಅಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.
