Saturday, July 11, 2026
Homeಕ್ರೈಮ್ಬಾಳೆಹೊನ್ನೂರು: ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್: JCI ಸರ್ಕಲ್ ನಲ್ಲಿ ಪ್ರತಿಭಟನೆ,‌ ನೂರಾರು ಜನರು...

ಬಾಳೆಹೊನ್ನೂರು: ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್: JCI ಸರ್ಕಲ್ ನಲ್ಲಿ ಪ್ರತಿಭಟನೆ,‌ ನೂರಾರು ಜನರು ಭಾಗಿ

Telegram Group
Join Now

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದ ಪ್ರಕರಣ ಸಂಬಂಧ ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಇಂದು ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಖಾಂಡ್ಯ ಹೋಬಳಿ ಬಂದ್‌ಗೆ ಕರೆ ನೀಡಲಾಗಿದೆ.

ಬಾಳೆಹೊನ್ನೂರಿನ JCI ಸರ್ಕಲ್ ನಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಜನರು ಭಾಗಿಯಾಗಿದ್ದಾರೆ. ರಾಜ್ಯದಕಾಂಗ್ರೆಸ್ ಸರ್ಕಾರ ಮತ್ತು ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ, ಜೆಡಿಎಸ್ ಮತ್ತು ರೈತ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದು, ರೈತ ವಿರೋಧಿ ರಾಜ್ಯ ಸರ್ಕಾರ ಎಂಬ ಘೋಷಣೆಗಳು ಈ ವೇಳೆ ಮೊಳಗಿವೆ.

ಪ್ರತಿಭಟನೆಗೆ ಕರೆ ಹಿನ್ನೆಲೆ ಬಾಳೆಹೊನ್ನೂರಿನ ಅರಣ್ಯ ಇಲಾಖೆ ಕಚೇರಿಗೆ ಪೊಲೀಸ್​​ ಬಿಗಿ ಭದ್ರತೆ ಒದಗಿಸಲಾಗಿದೆ. ಸ್ಥಳದಲ್ಲಿ KSRP ತುಕಡಿ ಸೇರಿದಂತೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡುವ ಮೂಲಕ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments