ಬಾಳೆಹೊನ್ನೂರು: ಡಿ.ಕೆ ಶಿವಕುಮಾರ್ ಅವರ ಅವಶ್ಯಕತೆ ಬಿಜೆಪಿಗಿಲ್ಲ. ಆ ಬಗ್ಗೆ ನಾವು ಯೋಚಿಸಿಯೂ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ
ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವೇಳೆ, ಡಿಕೆಶಿಗೆ ಬಿಜೆಪಿಯಿಂದ ಬೆಂಬಲದವಿದೆ ಎಂಬ ವದಂತಿ ಬಗ್ಗೆ ಪ್ರತಿಕ್ರಿಯಿಸಿದರು. ಅವರ ಅವಶ್ಯಕತೆ ನಮಗಿಲ್ಲ. ಅದರ ಬಗ್ಗೆ ನಾವು ಚಿಂತನೆಯನ್ನು ಕೂಡ ಮಾಡಿಲ್ಲ. ಬಿಜೆಪಿ ಬಲಿಷ್ಠವಾಗಿದೆ ಎಂದಿದ್ದಾರೆ.
ಕುರ್ಚಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಟಕ ಮಾಡುತ್ತಿದ್ದಾರೆ. ಲಜ್ಜೆಗೆಟ್ಟ, ಭ್ರಷ್ಟಾಚಾರ, ಮರ್ಯಾದಿ ಬಿಟ್ಟ ಸರ್ಕಾರ ಯಾವುದಾದರೂ ಇದ್ದರೆ ಅದು ರಾಜ್ಯದ ಕಾಂಗ್ರೆಸ್ ಸರ್ಕಾರ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಸಿಎಂ ಸಿದ್ದರಾಮಯ್ಯ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ತನಿಖೆ ಮಾಡಲಿಲ್ಲ. ಎಲ್ಲಾ ಕಾಮಗಾರಿಯಲ್ಲೂ 60% ಕಮಿಷನ್ ದಂಧೆ ಮುಂದುವರಿದಿದೆ ಎಂದು ಆರೋಪಿಸಿದ್ದಾರೆ.
