Friday, February 13, 2026
Homebig breakingಬಣಕಲ್: 15 ವರ್ಷದ ಬಾಲಕ ಹೃದಯಾಘಾತದಿಂದ ಸಾವು!

ಬಣಕಲ್: 15 ವರ್ಷದ ಬಾಲಕ ಹೃದಯಾಘಾತದಿಂದ ಸಾವು!

ಚಿಕ್ಕಮಗಳೂರು:15 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿನಡೆದಿದೆ.. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ.

ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ಪ್ರೀತಮ್, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂತರ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೃಂಗೇರಿ: ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಕಾರ್ಯಕ್ರಮವನ್ನು ಇದೇ 10 ರಿಂದ 12ರ ವರೆಗೆ ಶೃಂಗೇರಿಯ ಕಲ್ಕಟ್ಟೆ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.

10.08.2025 ಭಾನುವಾರದಿಂದ 12.08.2025 ಮಂಗಳವಾರದ ವರೆಗೆ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಆಯೋಜಿಸಿದ್ದು, ತನು-ಮನ-ಧನ ಸಹಾಯದೊಂದಿಗೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾಗುವಂತೆ ಸಮಿತಿಯಿಂದ ತಿಳಿಸಿದ್ದಾರೆ.

10.08.2025 ಭಾನುವಾರದಂದು ಬೆಳಿಗ್ಗೆ 8 ಗಂಟೆಯಿಂದ ಶ್ರೀ ರಾಮತಾರಕ ಹೋಮ, ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದವರಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾನಿಧಿ ವಿತರಣೆ ಮಧ್ಯಾಹ್ನ 3-30 ಗಂಟೆಯಿಂದ ಶ್ರೀ ವೆಂಕಟೇಶ್ವರ ಯಕ್ಷಗಾನ ಕಲಾಸಂಘ (ರಿ), ಹೊನ್ನವಳ್ಳಿ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಲೆ 6-30 ಗಂಟೆಯಿಂದ ಗುರುರಾಯರಿಗೆ ವಿಶೇಷ ಪೂಜೆ, ಅಷ್ಟಾವಧಾನ ಸೇವೆ ಹಾಗೂ 8 ಗಂಟೆಗೆ ಮಹಾಮಂಗಳಾರತಿ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.

11.08.2025 ಸೋಮವಾರದಂದು ಬೆಳಿಗ್ಗೆ 6.30ರಿಂದ ಮಧ್ಯಾರಾಧನೆ ಪ್ರಯುಕ್ತ ಆರಾಧನಾ ಸಂಬಂಧಿತ ಕಾರ್ಯಕ್ರಮ, 7 ಗಂಟೆಗೆ ಆಂಜನೇಯ ಮೂಲಮಂತ್ರ ಹೋಮ, 8 ಗಂಟೆಗೆ ಸರ್ವಸೇವೆಯ ಸಂಕಲ್ಪ ಪ್ರಾರಂಭ ಹಾಗೂ 9.30 ರಿಂದ ಪಂಚಾಮೃತ ಅಭಿಷೇಕ ಕಾರ್ಯಕ್ರಮ ನಡೆಯಲಿದೆ. ಸಂಜೆ 5-00 ರಿಂದ ಶ್ರೀಯುತ ಆನಂದ ದೇಶಪಾಂಡೆ ಮತ್ತು ಸಂಗಡಿಗರು, ಬೆಂಗಳೂರು ಇವರಿಂದ ದಾಪವಾಣಿ ಕಾರ್ಯಕ್ರಮ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!