ಮೂಡಿಗೆರೆ: ನಿಯಂತ್ರಣ ತಪ್ಪಿದ ಕಾರು ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಬಣಕಲ್ ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ

ಮೂಡಿಗೆರೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ತೀವ್ರವಾಗಿ ನಿಯಂತ್ರಣ ತಪ್ಪಿ, ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಿಜಯ್ ಹಾಗೂ ಶೇಖರ್ ಎಂಬವರ ದ್ವಿಚಕ್ರವಾಹನಗಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ದ್ವಿಚಕ್ರವಾಹನಗಳು ತೀವ್ರವಾಗಿ ಹಾನಿಗೊಂಡಿದ್ದು ಇಬ್ಬರಿಗೆ ಪೆಟ್ಟಾಗಿದ್ದು ಆಸ್ಪತ್ರೆ ಗೆ ರವಾನಿಸಲಾಗಿದೆ.

ಪ್ರಕರಣ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.