ಮೂಡಿಗೆರೆ : ತಾಲೂಕಿನ ಸುತ್ತಮುತ್ತ ತಲೆ ನೋವಾಗಿದ್ದ ಗೋಸಾಗಣಿಕೆಯ ಖದೀಮರನ್ನು ಪತ್ತೆ ಹಚ್ಚುವಲ್ಲಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆ ಸಿಬ್ಬಂದಿ ಯಶಸ್ಸು ಕಂಡಿದ್ದಾರೆ
ಮೂವರು ಅಂತರ ಜಿಲ್ಲಾ ದನ ಕಳ್ಳರಾದ ಯೂನಿಸ್ ಕಾರ್ಕಳ, ನಾಸಿರ್ ಮೂಡಬಿದ್ರೆ ಹಾಗೂ ಇಕ್ಬಾಲ್ ಮೂಡಬಿದ್ರೆ ಇವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಅದಲ್ಲದೆ ಗೋ ಸಾಗಣಿಕೆಗೆ ಬಳಸುತ್ತಿದ್ದ ರಿಟ್ಜ್ ಕಾರು ವಾಹನವನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ.
ಬಣಕಲ್ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ 56/2025 ಮತ್ತು 72/2025 ಅಡಿಯಲ್ಲಿ ಭಾರತೀಯ ದಂಡ ಸಂಹಿತೆ (BNS) ಕಲಂ 303 ರಂತೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿತರು ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಸುತ್ತ ಮುತ್ತ ನಡೆದ ಹಲವು ದನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಈ ಕಾರ್ಯಾಚರಣೆಯನ್ನು ಬಣಕಲ್ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಮತಿ ರೇಣುಕಾ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಯವರು ಯಶಸ್ವಿಯಾಗಿ ನಡೆಸಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ವಿಕ್ರಂ ಅಮಟೆ, ಐಪಿಎಸ್, ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಇವರ ಕರ್ತವ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
