Saturday, March 28, 2026
Homeಜಿಲ್ಲಾಸುದ್ದಿಬಣಕಲ್: ಹದಗೆಟ್ಟ ರಸ್ತೆ: ಸಾರ್ವಜನಿಕರೇ ಹಣ ಸಂಗ್ರಹಿಸಿ ದುರಸ್ತಿ ಕಾರ್ಯ!

ಬಣಕಲ್: ಹದಗೆಟ್ಟ ರಸ್ತೆ: ಸಾರ್ವಜನಿಕರೇ ಹಣ ಸಂಗ್ರಹಿಸಿ ದುರಸ್ತಿ ಕಾರ್ಯ!

ಮೂಡಿಗೆರೆ/ಬಣಕಲ್ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕ್ಕಿನ ಹೆಗ್ಗುಡ್ಲು ಗ್ರಾಮದ ಕಲ್ಯಾಣ ಗದ್ದೆ ಹೋಗುವ ಹದಗೆಟ್ಟಿರುವ ರಸ್ತೆಯನ್ನು ಸಾರ್ವಜನಿಕರೇ ಹಣ ಸಂಗ್ರಹಿಸಿ ದುರಸ್ತಿ ಕಾರ್ಯ ಮಾಡಿದ್ದಾರೆ.

ಸುಮಾರು 2ಲಕ್ಷ ಹಣ ಸಂಗ್ರಹಿಸಿ ಗ್ರಾಮಸ್ಥರೇ ರಸ್ತೆ ದುರಸ್ಥಿ ಕಾರ್ಯ ಮಾಡಿದ್ದಾರೆ. ಹದಗೆಟ್ಟ ರಸ್ತೆಯನ್ನು ಹಣ ಕೂಡಿಸಿ ಗುಂಡಿ ಮುಚ್ಚಿಸಿ ಮಾದರಿ ಎನಿಸಿದ್ದಾರೆ.ತಮ್ಮ ಸ್ವಂತ ಕೆಲಸ ಕಾರ್ಯಗಳನ್ನು ಬಿಟ್ಟು ಗ್ರಾಮಕ್ಕಾಗಿ ರಸ್ತೆ ದುರಸ್ತಿ ಕಾರ್ಯ ಮಾಡಿಸಿ ಅಚ್ಚರಿ ಮೂಡಿಸಿದ್ದಾರೆ. ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಮಾಡಿಕೊಡುವಂತೆ MLA ನಯನಾ ಮೋಟಮ್ಮ ಬಳಿ ಅನೇಕ ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನ ಆಗಲಿಲಿಲ್ಲ. ಹಾಗಾಗೀ ಭ್ರಮನಿರಸನಗೊಂಡ ಗ್ರಾಮಸ್ಥರೇ ಹಣ ಸಂಗ್ರಹಿಸಿ ರಸ್ತೆ ದುರಸ್ತಿ ಮಾಡಿದ್ದಾರೆ.

ಹಲವು ಬಾರಿ ತಮ್ಮ ಮನವಿಯನ್ನು ಸ್ವೀಕರಿಸಿ ರಸ್ತೆ ದುರಸ್ತಿ ಮಾಡಿಕೊಡದ ಜನಪ್ರತಿನಿಧಿಗಳು ಹಾಗೂ ಸರ್ಕಾರದ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಮಳೆಗಾಲದಲ್ಲಿ ಮೊಣಕಾಲುದ್ಧ ನೀರು ನಿಲ್ಲುತ್ತಿತ್ತು, ರಾಡುಗಳು ರಸ್ತೆಯಿಂದ ಮೇಲೆ ಎದ್ದು ಜನರ ಜೀವಕ್ಕೆ ಅಪಾಯ ತಂದೊಡ್ಡುವುದು ಖಾತರಿಯಾಗಿತ್ತು. ಇದರಿಂದ ಗ್ರಾಮಸ್ಥರಿಗೆ ಓಡಾಡಲು ತುಂಬಾ ಕಷ್ಟವಾಗಿತ್ತು. ಹೀಗಾಗಿ ಸ್ವತಃ ಗ್ರಾಮದಲ್ಲಿ ಗ್ರಾಮಸ್ಥರು ಹಣ ಸಂಗ್ರಹಿಸಿ ರಸ್ತೆ ಗುಂಡಿ ಮುಚ್ಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!