Saturday, September 26, 2026
Homeಕ್ರೈಮ್ಬೇಲೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಕಿರುಕುಳ: ಆಟೋ ಚಾಲಕ ಅರೆಸ್ಟ್!

ಬೇಲೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಕಿರುಕುಳ: ಆಟೋ ಚಾಲಕ ಅರೆಸ್ಟ್!

Telegram Group
Join Now

ಬೇಲೂರು: ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದು ಪ್ರೀತಿಸುವಂತೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ.

ಮನು (27) ಬಂಧಿತ ಆಟೋ ಚಾಲಕ. ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಮನು ಪ್ರೀತಿಸುವಂತೆ ವಿದ್ಯಾರ್ಥಿನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ರಸ್ತೆಯಲ್ಲಿ ವಿದ್ಯಾರ್ಥಿನಿಯ ಮೈಕೈ ಮುಟ್ಟಿ ಎಳೆದಾಡಿದ್ದ.

ಆಟೋ ಚಾಲಕನ ಕಿರುಕುಳದಿಂದ ಬೇಸತ್ತಿದ್ದ ಅಪ್ರಾಪ್ತ ಬಾಲಕಿ ತಮ್ಮ ಪೋಷಕರ ಬಳಿ ಅಳಲು ತೋಡಿಕೊಂಡಿದ್ದರು. ಕಡೆಗೆ ಪೊಲೀಸರಿಗೆ ದೂರು ನೀಡಿದ್ದು, ಆಟೋ ಚಾಲಕನನ್ನು ಬಂಧಿಸಿದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದಾರೆ.

ಘಟನೆ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!