Thursday, February 12, 2026
Homeಜಿಲ್ಲಾಸುದ್ದಿಬೇಲೂರು: ನಾಳೆ ಚಂದ್ರಗ್ರಹಣ ಹಿನ್ನೆಲೆ: ಚನ್ನಕೇಶವ ದೇವಾಲಯದ ಗರ್ಭಗುಡಿ ಬಾಗಿಲು ಬಂದ್‌

ಬೇಲೂರು: ನಾಳೆ ಚಂದ್ರಗ್ರಹಣ ಹಿನ್ನೆಲೆ: ಚನ್ನಕೇಶವ ದೇವಾಲಯದ ಗರ್ಭಗುಡಿ ಬಾಗಿಲು ಬಂದ್‌

ಬೇಲೂರು: ನಾಳೆ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಐತಿಹಾಸಿಕ ಶ್ರೀ ಚನ್ನಕೇಶವ ದೇವಾಲಯದ ಗರ್ಭಗುಡಿ ಬಾಗಿಲು ಬಂದ್‌ ಮಾಡಲಾಗಿದೆ.

ನಾಳೆ ಮಧ್ಯಾಹ್ನ 3.30ಕ್ಕೆ ಬಂದ್‌ ಆಗಲಿರುವ ಶ್ರೀ ಚನ್ನಕೇಶವ ದೇವಾಲಯ ಆದರೆ ಬೆಳಗ್ಗೆ ಎಂದಿನಂತೆ ದೇವಸ್ಥಾನದ ಪೂಜೆ ನಡೆಯಲಿರುತ್ತದೆ.ಚಂದ್ರಗ್ರಹಣ ಹಿನ್ನೆಲೆಯಲ್ಲಿ ಸಂಜೆ ಪೂಜೆಯನ್ನು ಮಧ್ಯಾಹ್ನ 3.30ಕ್ಕೆ ಮಾಡಿ ಆ ನಂತರ ಗರ್ಭಗುಡಿ ಬಾಗಿಲು ಬಂದ್‌ ಮಾಡಲಾಗುವುದು ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ.

ನಾಳೆ ವೀಕೆಂಡ್‌ ಇರುವುದರಿಂದ ಹೆಚ್ಚಿನ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 3.30ರ ನಂತರ ಪೂಜೆ ನಡೆಯುವುದಿಲ್ಲ ಸೋಮವಾರ ಬೆಳಗ್ಗೆ 6.30ಕ್ಕೆ ಎಂದಿನಂತೆ ದೇವಾಲಯವನ್ನು ಶುಚಿಗೊಳಿಸಿ ಪೂಜೆ ಮಾಡಲಾಗುವುದು.

ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ಟರು ಹಾಗೂ ನರಸಿಂಹಪ್ರಿಯ ಭಟ್ಟರಿಂದ ಮಾಹಿತಿ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!