ಬೇಲೂರು : ತಾಲೂಕಿನ ಮಲೆನಾಡು ಭಾಗದ ಅರೇಹಳ್ಳಿ ಹೋಬಳಿ ವ್ಯಾಪ್ತಿಯ ಮಲಸಾವರ ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಓಡಾಟ ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಹಾಗೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಕೊಣನೂರು ಹೋಬಳಿ ಹೊಸನಗರ ಹಾಗೂ ಸುತ್ತಮುತ್ತ ಗ್ರಾಮದಲ್ಲಿ ಆನೆ ದಾಳಿಯಿಂದ ಬೆಳೆ ನಾಶಗೊಂಡಿದೆ.
ರೈತ ನಾಗರಾಜ್ ಹಾಗೂ ಇತರರು ಬೆಳೆ ಕಳೆದುಕೊಂಡು ಕಂಗಾಲಾಗಿದ್ದು ರೈತ ಕುಟುಂಬಕ್ಕೆ ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಶೀಘ್ರವೇ ಪರಿಹಾರ ಕೊಡಬೇಕೆಂದು ಮನವಿ ಮಾಡಲಾಗಿದೆ.
