ಹಾಸನ : ಒಂದೇ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಪ್ರಕರಣ ಕ್ಷಣ ಕ್ಷಣಕ್ಕೂ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ.ಹಾಗೆಯೇ ಈ ಘಟನೆ ಜಾಗತಿಕವಾಗಿ ಸುದ್ದಿ ಮಾಡುತ್ತಿದ್ದು, ಆರೋಪಿಗೆ ಕಠಿಣ ಶಿಕ್ಷೆ ಆಗಲಿ ಎಂದು ಆಗ್ರಹ ಮಾಡುತ್ತಿದ್ದಾರೆ.
ನಾಪತ್ತೆಯಾಗಿದ್ದ ಕುಟುಂಬದ ಇಬ್ಬರು ಸದಸ್ಯರಾದ ಶಂಕರ್ ಮತ್ತು ನಳಿನಿ ಅವರ ಮೃತದೇಹಗಳನ್ನ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಸಮೀಪ ಶಿರಾಡಿಘಾಟ್ ಕಂದಕಕ್ಕೆ ಎಸೆದಿದ್ದ ಹಂತಕ ಇಂದುಶೇಖರ್ ಎರಡು ಶವಗಳನ್ನು ಕಂದಕದಿಂದ ಮೇಲೆ ತಂದ ಪೊಲೀಸರು ಇದರೊಂದಿಗೆ ಪ್ರಕರಣದಲ್ಲಿ ಹತ್ಯೆಗೀಡಾದ ಏಳು ಮಂದಿಯ ಮೃತದೇಹಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೃತದೇಹಗಳು ಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ರಾಜಾಜಿನಗರ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಂಡ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದೆ.
ಸ್ಥಳದಲ್ಲಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆಯಿದೆ.
ಈ ಹಿಂದೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ದಿವ್ಯಾ ಮತ್ತು ಶಿವಕುಮಾರ್ ಅವರ ಮೃತದೇಹಗಳು ಪತ್ತೆಯಾಗಿದ್ದವು. ತಮಿಳುನಾಡಿನ ಸೇಲಂನಲ್ಲಿ ರೂಪವತಿ ಮತ್ತು ಸುನೀತಾ ಅವರ ಶವಗಳು ಪತ್ತೆಯಾಗಿದ್ದವು. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಏಳು ವರ್ಷದ ಬಾಲಕ ಪುನೀತ್ನ ಮೃತದೇಹ ಪತ್ತೆಯಾಗಿತ್ತು.
