Saturday, August 8, 2026
Homeಜಿಲ್ಲಾಸುದ್ದಿBike Wheeling: ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರಿಂದ ಬೈಕ್ ವ್ಹೀಲಿಂಗ್: ಸಾರ್ವಜನಿಕರು ತೀವ್ರ ಆಕ್ರೋಶ

Bike Wheeling: ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರಿಂದ ಬೈಕ್ ವ್ಹೀಲಿಂಗ್: ಸಾರ್ವಜನಿಕರು ತೀವ್ರ ಆಕ್ರೋಶ

Telegram Group
Join Now

ಮೂಡಿಗೆರೆ:  ತಾಲ್ಲೂಕಿನ ಕೊಟ್ಟಿಗೆಹಾರ ಪೆಟ್ರೋಲ್ ಬಂಕ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಪ್ರವಾಸಿಗರು ಅತಿ ವೇಗದಲ್ಲಿ ಬೈಕ್ ಚಲಾಯಿಸುತ್ತಾ ವ್ಹೀಲಿಂಗ್ ಮಾಡಿರುವ ದೃಶ್ಯಗಳು ಸ್ಥಳೀಯರನ್ನು ಬೆಚ್ಚಿಬೀಳಿಸಿವೆ.

ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ಇಂತಹ ಅಪಾಯಕಾರಿ ಸ್ಟಂಟ್‌ಗಳು ಯಾವುದೇ ಕ್ಷಣದಲ್ಲಿ ಭೀಕರ ಅಪಘಾತಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರವಾಸಿಗರ ಈ ನಿರ್ಲಕ್ಷ್ಯ ಮತ್ತು ಕಾನೂನು ಉಲ್ಲಂಘಿಸುವ ವರ್ತನೆಗೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಒತ್ತಾಯಿಸಿದ್ದು, ವೀಲಿಂಗ್ ಮಾಡುವವರ ವಿರುದ್ಧ ಕಠಿಣ ಪ್ರಕರಣ ದಾಖಲಿಸಿ ವಾಹನಗಳನ್ನು ವಶಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಷಣಿಕ ಮೋಜಿಗಾಗಿ ಜೀವದ ಜೊತೆ ಚೆಲ್ಲಾಟವಾಡುವ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments