ಸಕಲೇಶಪುರ : ಹರಿಯಾಣ ವಿಧಾನಸಭೆಯಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಿದರು.
ಮಂಗಳವಾರ ಸಂಜೆ ನಗರದ ಹಳೆ ಬಸ್ ನಿಲ್ದಾಣ ಸಮೀಪ ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತ ಪಡಿಸಿದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಪರ ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಲೋಕಸಭಾ ಚುನಾವಣೆ ಹಾಗೂ ಎರಡು ರಾಜ್ಯಗಳ ಚುನಾವಣೆಯಲ್ಲಿ ಮತದಾರರು ಮೋದಿ ನಾಯಕತ್ವವನ್ನು ಬೆಂಬಲಿಸಿದ್ದಾರೆ. ಕೆಲವೇ ದಿನದಲ್ಲಿ ಕಾಂಗ್ರೆಸ್ ಮುಕ್ತ ಭಾರತವಾಗಲಿದೆ. ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲೂ ಸಹ ನಿರೀಕ್ಷೆಗೂ ಮೀರಿ ಬಿಜೆಪಿಗೆ ಫಲಿತಾಂಶ ಬಂದಿದೆ. ನಮ್ಮ ರಾಜ್ಯದಲ್ಲಿ ಅನೇಕ ಭಾಗ್ಯಗಳನ್ನು ನೀಡಿ ರಾಜ್ಯದ ಬೊಕ್ಕಸ ಸಂಪೂರ್ಣ ಖಾಲಿಯಾಗಿದ್ದು, ಅಭಿವೃದ್ಧಿ ಮರೀಚಿಕೆಯಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರದ ಸುಳಿಯಲ್ಲಿ ಸಿಲುಕಿದ್ದು, ರಾಜೀನಾಮೆ ನೀಡದೆ ಬಂಡತನ ತೋರಿಸುತ್ತಿದ್ದಾರೆ. ರಾಜ್ಯದಲ್ಲೂ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಹಿಂದು ಸಂಘಟನೆ ಮುಖಂಡ ರಘು ಸಕಲೇಶಪುರ, ಬಿಜೆಪಿ ನಗರ ಅಧ್ಯಕ್ಷ ಲೋಕೇಶ್, ತಾಲೂಕು ಮಾಜಿ ಅಧ್ಯಕ್ಷ ಕ್ಯಾಮನಹಳ್ಳಿ ರಾಜ್ ಕುಮಾರ್, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಗೋಪಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಆನಂದ್ ಲಿಯೋ, ಬಿಜೆಪಿ ಯುವ ಮುಖಂಡ ಪುನೀತ್ ಬನ್ನಳ್ಳಿ ಸೇರಿದಂತೆ ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು
ಹರಿಯಾಣದಲ್ಲಿ ಬಿಜೆಪಿ ಗೆಲುವು – ಸಕಲೇಶಪುರದಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
RELATED ARTICLES