ಮೂಡಿಗೆರೆ: ಪಂಚ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಸಾಧಿಸಿದ ಭರ್ಜರಿ ಗೆಲುವಿನ ಹಿನ್ನೆಲೆ, ಮೂಡಿಗೆರೆಯಲ್ಲಿ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಂ.ಕೆ. ಪ್ರಾಣೇಶ್ ಅವರು, ದೇಶದ ಜನತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದ ಮೇಲಿನ ವಿಶ್ವಾಸವನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಇದು ಪ್ರೇರಣೆಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿಜಯೋತ್ಸವಕ್ಕೆ ಕಳೆ ತಂದರು
