Monday, August 10, 2026
Homeಕ್ರೈಮ್Arrest: AI ಬಳಸಿ ಮಹಿಳೆ ನಗ್ನಚಿತ್ರ ರಚಿಸಿ, ಹಣಕ್ಕಾಗಿ ಬ್ಲ್ಯಾಕ್​ಮೇಲ್: ಇಬ್ಬರ ಬಂಧನ!

Arrest: AI ಬಳಸಿ ಮಹಿಳೆ ನಗ್ನಚಿತ್ರ ರಚಿಸಿ, ಹಣಕ್ಕಾಗಿ ಬ್ಲ್ಯಾಕ್​ಮೇಲ್: ಇಬ್ಬರ ಬಂಧನ!

Telegram Group
Join Now

ಚಿಕ್ಕಮಗಳೂರು: AI ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಇಬ್ಬರು ಆರೋಪಿಗಳು ಮಹಿಳೆಗೆ ಬ್ಲಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಹಿಳೆಯ ನಗ್ನ ಚಿತ್ರವನ್ನು ಎಐ ಮೂಲಕ ಕ್ರಿಯೇಟ್ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದರು. ಈ ಕುರಿತಂತೆ ಅಕ್ಷಯ್, ಸಾಹುಲ್ ಇಬ್ಬರನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರೆಸಿದ್ದಾರೆ.

ಬ್ಲ್ಯಾಕ್‌ಮೇಲ್‌ಗೆ ಮಣಿಯದಿದ್ದಾಗ ಕಿಡಿಗೇಡಿಗಳು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಇದರಿಂದ ಮನನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ​ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಗೃಹಿಣಿಯೊಬ್ಬರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಆರೋಪಿಗಳು ಎಐ ತಂತ್ರಜ್ಞಾನ ಬಳಸಿ ಗೃಹಿಣಿಯ ಫೋಟೋಗಳನ್ನು ವಿಕೃತವಾಗಿ ಎಡಿಟ್ ಮಾಡಿದ್ದಾರೆ. ಬಳಿಕ ಆ ಫೋಟೋಗಳನ್ನು ಗೃಹಿಣಿಯ ಮೊಬೈಲ್‌ಗೇ ಕಳುಹಿಸಿ, 30 ಲಕ್ಷ ರೂಪಾಯಿ ನೀಡುವಂತೆ ಡಿಮ್ಯಾಂಡ್ ಇಟ್ಟಿದ್ದಾರೆ. ಒಂದು ವೇಳೆ ಹಣ ನೀಡದಿದ್ದರೆ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

​ಆರೋಪಿಗಳ ಬೆದರಿಕೆಗೆ ಗೃಹಿಣಿ ಹಾಗೂ ಅವರ ಕುಟುಂಬದವರು ಬಗ್ಗದಿದ್ದಾಗ, ಕಿರಾತಕರು ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆಯೊಂದನ್ನು ತೆರೆದಿದ್ದಾರೆ. ಅದರಲ್ಲಿ ಎಡಿಟ್ ಮಾಡಿದ ಗೃಹಿಣಿಯ ಫೋಟೋಗಳನ್ನು ಅಪ್‌ಲೋಡ್ ಮಾಡಿ, ಕೇವಲ 300 ರೂಪಾಯಿಗೆ ಲಭ್ಯವಿದ್ದಾರೆ ಎಂದು ಅತ್ಯಂತ ಅಶ್ಲೀಲವಾಗಿ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋಗಳನ್ನು ನೋಡಿ ತೀವ್ರ ಅವಮಾನ ಹಾಗೂ ಮಾನಸಿಕವಾಗಿ ನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments