Thursday, July 9, 2026
Homeಕ್ರೈಮ್BREAKING: ಕೊಡಗಿನಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

BREAKING: ಕೊಡಗಿನಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Telegram Group
Join Now

ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದಲ್ಲಿ ನಡೆದಿದೆ.

ಹನುಮಂತ (57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಸಮೀಪದ ಟಾಟಾ ಕಾಫಿ ಎಸ್ಟೇಟ್ ನ ಎಮ್ಮೆಗುಂಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆ ನಡೆದ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಕಾಡಾನೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments