ಮೂಡಿಗೆರೆ:ಕಾಡಾನೆ ಸ್ಥಳಾಂತರ ವಿರೋಧಿಸಿ ವಿವಿಧ ಸಂಘ ಸಂಸ್ಥೆಗಳು ನಾಳೆ ಮೂಡಿಗೆರೆ ತಾಲೂಕಿನಲ್ಲಿ ಬಂದ್ಗೆ ಕರೆ ನೀಡಿದ್ದಾರೆ
ಬೇಲೂರ್ ಕಡೆಯಿಂದ ಮೂಡಿಗೆರೆ ಕಾಡನೆ ಸ್ಥಳಾಂತರ ಖಂಡಿಸಿ ಇಂದು ಪ್ರವಾಸಿ ಮಂದಿರದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಸಭೆ ನಡೆಸಿ ತೀರ್ಮಾನ ತೆಗೆದುಕೊಂಡಿದ್ದು.. ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಇರುತ್ತದೆ.
ಬೇಲೂರು ಭಾಗದಿಂದ ಸುಮಾರು 38ಕ್ಕೂ ಹೆಚ್ಚು ಕಾಡಾನೆಗಳನ್ನು ಮೂಡಿಗೆರೆ ಮೂಲಕ ಭದ್ರಾ ಅಭಯಾರಣ್ಯಕ್ಕೆ ಓಡಿಸುವ ಅರಣ್ಯ ಇಲಾಖೆಯ ಕಾರ್ಯಾಚರಣೆಗೆ ಸ್ಥಳೀಯರು, ರೈತರು ಮತ್ತು ಕಾಫಿ ಬೆಳೆಗಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆನೆಗಳನ್ನು ವಾಪಸ್ ಕಳುಹಿಸದಿದ್ದರೆ ಸಾರ್ವಜನಿಕರೆಲ್ಲರೂ ಸೇರಿ ಮೂಡಿಗೆರೆ ಬಂದ್ ಮಾಡಲು ನಿರ್ಧರಿಸಿದ್ದಾರೆ ಎಚ್ಚರಿಕೆ ನೀಡಿದ್ದಾರೆ.
ಸ್ಥಳೀಯರ ತೀವ್ರ ವಿರೋಧ ಮತ್ತು ಶಾಸಕಿ ನಯನಾ ಮೋಟಮ್ಮ ಅವರ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಅರಣ್ಯ ಇಲಾಖೆಯು ಆನೆ ಓಡಿಸುವ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಹಿರಿಯ ಅಧಿಕಾರಿಗಳು ತುರ್ತು ಸಭೆ ನಡೆಸುತ್ತಿದ್ದಾರೆ.
ನಿಷೇಧಾಜ್ಞೆ ಜಾರಿ. ಕಾಡಾನೆಗಳ ಹಿಂಡು ತಾಲೂಕಿನ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮೂಡಿಗೆರೆ ತಾಲೂಕಿನ 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಬಿಎನ್ಎಸ್ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಾಹಿತಿ ಕೊರತೆಯಿಂದಾಗಿ ಆದೇಶ ಹಿಂಪಡೆಯಲಾಗಿತ್ತು
