Saturday, August 8, 2026
Homeಕ್ರೈಮ್ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ದುರ್ಮರಣ!

ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ದುರ್ಮರಣ!

Telegram Group
Join Now

ಕೊಟ್ಟಿಗೆಹಾರ: ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ನಡೆದಿದೆ.

ಕಾರಿನಲ್ಲಿದ್ದ ಗುರುಕಿರಣ್ (28), ಮೋಹನ್ (30) ಜ್ಞಾನೇಶ್(28) ಸ್ಥಳದಲ್ಲೇ ಸಾವು, ಹಾಗೆ ಪ್ರೇಮ್ ಕುಮಾರ್, ಹೃತಿಕ್ ಸ್ಥಿತಿ ಗಂಭೀರವಾಗಿ ಗಾಯಗೊಂಡಿದ್ದು ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾಗಿದ್ದಾರೆ.

ಮೃತರು ಮತ್ತು ಗಾಯಾಳುಗಳು ತುಮಕೂರಿನಿಂದ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಮುಂಭಾಗ ಹಾದುಹೋಗುವ ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಭಾರೀ ಶಬ್ದ ಕೇಳಿ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ತಕ್ಷಣ ಆಸ್ಪತ್ರೆಗೆ ರವಾನಿಸಲು ಸಹಕರಿಸಿದ್ದಾರೆ.

ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments