Tuesday, August 11, 2026
Homeಕ್ರೈಮ್ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ಹೊಲಕ್ಕೆ ಹಾರಿ ಬಿದ್ದ ಕಾರು: ನಾಲ್ವರ ಸ್ಥಿತಿ...

ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ಹೊಲಕ್ಕೆ ಹಾರಿ ಬಿದ್ದ ಕಾರು: ನಾಲ್ವರ ಸ್ಥಿತಿ ಗಂಭೀರ!

Telegram Group
Join Now

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ (Crash Barrier) ಡಿಕ್ಕಿ ಹೊಡೆದು ರಸ್ತೆ ಪಕ್ಕದ ಹೊಲಕ್ಕೆ ಹಾರಿ ಬಿದ್ದಿರುವ ಘಟನೆ ಆಲೂರು ತಾಲ್ಲೂಕಿನ, ತಿಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ಹೌದು .. ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಉಳಿದ ಮೂವರಿಗೆ ಗಾಯಗಳಾಗಿವೆ.ಮಮಾಕ್ಷ ಎಂಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಾದ ಪ್ರಜ್ವಲ್, ಗುರುಪ್ರಸಾದ್ ಅವರಿಗೂ ಚಿಕಿತ್ಸೆ ನೀಡಲಾಗಿದೆ.

ಸಕಲೇಶಪುರ ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ KA-13-P-4925 ನಂಬರ್‌ನ ಕ್ರೆಟಾ ಕಾರು ನಾಲ್ವರು ವಿದ್ಯಾರ್ಥಿಗಳು ಬರುತ್ತಿದ್ದು  ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ರೈತನ ಹೊಲದಲ್ಲಿದ್ದ 11 KV ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಹಾರಿ ಬಿದ್ದಿದೆ.

ರಾಷ್ಟ್ರೀಯ ಹೆದ್ದಾರಿಯಿಂದ 100-150 ಮೀಟರ್ ದೂರದವರೆಗೂ ಹಾರಿ ಬಿದ್ದಿರುವ ಕಾರು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ತಪ್ಪಿದ ಬಾರಿ ಅನಾಹುತ ಈ ವೇಳೆ ಹೊಲದಲ್ಲಿದ್ದ ಎರಡು ವಿದ್ಯುತ್ ಕಂಬಗಳು ಮುರಿದು ಹೋಗಿವೆ ಹಾಗೆ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅತೀ ವೇಗದಿಂದ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments