ಬೆಳ್ತಂಗಡಿ(ದಕ್ಷಿಣ ಕನ್ನಡ) : ಮಂದಗತಿಯಿಂದ ಸಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ನಡೆಯಿತು.
ಬಿಸಿರೋಡ್ ಹಾಗೂ ಬೆಳ್ತಂಗಡಿಯ ಮೂರು ಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕ್ಷೇತ್ರ ಸಮಿತಿ ಸದಸ್ಯ ನವಾಝ್ ಕಟ್ಟೆ ಮಾತನಾಡಿ, ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಆರಂಭಗೊಂಡು ವರ್ಷಗಳೇ ಕಳೆದ್ರೂ ಇನ್ನು ಕಾಮಗಾರಿ ಪೂರ್ಣಗೊಂಡಿಲ್ಲ. ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಚಿಕ್ಕಮಗಳೂರು ಮತ್ತು ದ. ಕ ಜಿಲ್ಲೆಯ ಸಂಪರ್ಕ ರಸ್ತೆಯಾಗಿರುದರಿಂದ ನಿತ್ಯ ಸಾವಿರಾರು ವಾಹನಗಳು ಮೂಲಕ ಸಂಚರಿಸುತ್ತವೆ. ಹದಗೆಟ್ಟ ರಸ್ತೆಯಿಂದ ರಾಜ್ಯ ಸಾರಿಗೆ ಬಸ್‌ಗಳನ್ನು ಕಡಿಮೆಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


