ಚಿಕ್ಕಮಗಳೂರು : ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು ದೀಪಾವಳಿ ಹಬ್ಬದ ಸಂತೋಷ ಕುಟುಂಬಕ್ಕೆ ಮರ್ಮಾಘಾತವಾಗಿದೆ.
ಹೌದಿ .. ದ್ರಾಕ್ಷಾಯಿಣಿ (20) ಮೃತ ದುರ್ದೈವಿ, ತಂದೆ ರಮೇಶ್ ಸ್ಥಿತಿ ಗಂಭೀರವಾಗಿದೆ. ಸಂಬಂಧಿ ಮನೆಗೆ ದೀಪಾವಳಿ ಹಬ್ಬಕ್ಕೆ ತಂದೆ-ಮಗಳು ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದ ಬೈಕ್ ಪರಿಣಾಮ ಪುತ್ರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇವರು ಲಿಂಗದಹಳ್ಳಿ ಸಮೀಪದ ಶಾಂತಿನಗರ ನಿವಾಸಿಗಳು
ಶಾಂತಿನಗರದಿಂದ ಎಂ.ಸಿ.ಹಳ್ಳಿ ಗ್ರಾಮದಲ್ಲಿದ್ದ ಚಿಕ್ಕಮ್ಮನ ಮಗಳ ಮನೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ರಮೇಶ್ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
