Tuesday, July 7, 2026
Homeಜಿಲ್ಲಾಸುದ್ದಿChickmagalore: ಕಾಡುಕೋಣ ದಾಳಿಗೆ ಮಹಿಳೆ ಬಲಿ!

Chickmagalore: ಕಾಡುಕೋಣ ದಾಳಿಗೆ ಮಹಿಳೆ ಬಲಿ!

Telegram Group
Join Now

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಬಿಳಗುಳಿ ಗ್ರಾಮದ ಬಳಿ ಈ ಅವಘಡ ಸಂಭವಿಸಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿದೆ.

ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದ್ದು ದಾಳಿಯಲ್ಲಿ ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಬಲವಾಗಿ ತಿವಿದಿರೋ ಕಾರಣ ತೀವ್ರ ರಕ್ತಸ್ರಾವವಾಗಿದೆ.ಗಂಭಿರಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಕಳಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments