ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಲೇಖನಾ (10) ಮೃತ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ದುರ್ಘಟನೆ ನಡೆದಿದೆ. ಮನೆಯಲ್ಲಿ ಜೋಕಾಲಿ ಆಡುವಾಗ ಸೀರೆ ಉರುಳಾಗಿ ಬಾಲಕಿ ಸಾವನ್ನಪ್ಪಿದ್ದಾಳೆ.
ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ
