Friday, March 27, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ವಾಯುಭಾರ ಕುಸಿತ: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ : ಕಾಫಿ ಬೆಳೆಗಾರರಲ್ಲಿ ಆತಂಕ!

ಚಿಕ್ಕಮಗಳೂರು: ವಾಯುಭಾರ ಕುಸಿತ: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ : ಕಾಫಿ ಬೆಳೆಗಾರರಲ್ಲಿ ಆತಂಕ!

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ 48 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮಳೆಯ ಜೊತೆಗೆ ಜಿಲ್ಲೆಯಲ್ಲಿ ಶೀತ ಗಾಳಿಯೂ ಮುಂದುವರೆಯಲಿದ್ದು, ಸಾರ್ವಜನಿಕರು ಹವಾಮಾನ ವೈಪರೀತ್ಯಕ್ಕೆ ತಕ್ಕಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಹಳೆಯ ಕಟ್ಟಡಗಳು ಮತ್ತು ಮರಗಳ ಪಕ್ಕದಲ್ಲಿ ಇರುವವರು ಹೆಚ್ಚಿನ ಜಾಗೃತಿ ವಹಿಸಬೇಕು.

ಗುಡುಗು ಮತ್ತು ಮಿಂಚಿನ ಅಬ್ಬರ ಇರಲಿರುವ ಕಾರಣ ಜನರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ.

ಬಿರುಗಾಳಿಯ ತೀವ್ರತೆ ಹೆಚ್ಚಿರುವಾಗ ಜನರು ಮನೆಯಿಂದ ಹೊರಬರದೆ, ಕಿಟಕಿ-ಬಾಗಿಲುಗಳನ್ನು ಮುಚ್ಚಿಕೊಂಡು ಸುರಕ್ಷಿತವಾಗಿ ಇರಬೇಕು ಎಂದು ಇಲಾಖೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!