ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಾಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ನಗರ ಠಾಣೆಗೆ ದೂರು ನೀಡಿದ್ದಾರೆ.
ನವೆಂಬರ್ 12ರಂದು ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸಿಎಂ ಮತ್ತು ಡಿಸಿಎಂ ವಿರುದ್ಧ ಶಬ್ದಗಳನ್ನು ಬಳಸಿ ನಿಂದಿಸಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಾಕೇಶ್ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಬಂಧನದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿ ನಿಂದಿಸಿದ್ದಾರೆ ಎಂದು ದೂರಲಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರನ್ನು ಸಲ್ಲಿಸಿದ್ದಾರೆ.
