Saturday, August 15, 2026
Homeಕ್ರೈಮ್ಚಿಕ್ಕಮಗಳೂರು: ಸಿಎಂ & ಡಿಸಿಎಂ ವಿರುದ್ಧ ನಿಂದನೆ ಆರೋಪ: ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು!

ಚಿಕ್ಕಮಗಳೂರು: ಸಿಎಂ & ಡಿಸಿಎಂ ವಿರುದ್ಧ ನಿಂದನೆ ಆರೋಪ: ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು!

Telegram Group
Join Now

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಾಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ನಗರ ಠಾಣೆಗೆ ದೂರು ನೀಡಿದ್ದಾರೆ.

ನವೆಂಬರ್ 12ರಂದು ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸಿಎಂ ಮತ್ತು ಡಿಸಿಎಂ ವಿರುದ್ಧ ಶಬ್ದಗಳನ್ನು ಬಳಸಿ ನಿಂದಿಸಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಾಕೇಶ್ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಬಂಧನದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ‌ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿ ನಿಂದಿಸಿದ್ದಾರೆ ಎಂದು ದೂರಲಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರನ್ನು ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments