Sunday, February 22, 2026
Homeಕ್ರೈಮ್ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಒಂದೇ ವಾರಕ್ಕೆ ಮತ್ತೊಂದು ಬಲಿ: ಸ್ಥಳೀಯರಲ್ಲಿ ತೀವ್ರ ಆಕ್ರೋಶ!

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಒಂದೇ ವಾರಕ್ಕೆ ಮತ್ತೊಂದು ಬಲಿ: ಸ್ಥಳೀಯರಲ್ಲಿ ತೀವ್ರ ಆಕ್ರೋಶ!

ಚಿಕ್ಕಮಗಳೂರು: ತಾಲೂಕಿನ ಹುಣಸೆಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳಾ ಕಾರ್ಮಿಕರೊಬ್ಬರು ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್‌ ಮೂಲದ ಬೋರಮ್ಮ ನಾಗಲಿಂಗಪ್ಪ (40) ಮೃತ ದುರ್ದೈವಿ

https://whatsapp.com/channel/0029VaAUBknChq6Ibwwvi12W

PUBLIC IMPACT CHANNEL’ನ ಪ್ರತಿಯೊಂದು ಸುದ್ದಿಗಳು ಇಲ್ಲಿ ಸಿಗುತ್ತದೆ. ಮೇಲಿನ ಲಿಂಕ್ ಮೂಲಕ ಜಾಯಿನ್ ಆಗಿ..🙏🏻

ಕಳೆದ ಸೋಮವಾರವಷ್ಟೇ ಇದೇ ತೋಟದಲ್ಲಿ ಕಾರ್ಮಿಕ ಯಲ್ಲಪ್ಪ ಎಂಬುವರನ್ನು ಬಲಿ ಪಡೆದಿತ್ತು.ಈಗ ಅದೇ ಕಾಫಿ ಎಸ್ಟೇಟ್‌ ಅದೇ ಜಾಗದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಡಾನೆ ಮದವೇರಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು ಅದೇ ಕಾಡಾನೆ ಇಂದು ಈ ಮಹಿಳೆಯನ್ನು ಬಲಿ ಪಡೆದಿದೆ ಎನ್ನಲಾಗಿದೆ.

ಮಾಹಿತಿ ತಿಳಿದ ಕೂಡಲೇ ಘಟನೆ ಸಂಬಂಧ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಇಂದು ವಾರದ ಅವಧಿಯಲ್ಲಿ ಈ ಪ್ರದೇಶದಲ್ಲಿ ಇಬ್ಬರನ್ನು ಬಲಿಪಡೆದ ಕಾಡಾನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಕಾರ್ಯಚರಣೆ ಸ್ಥಗಿತಗೊಂಡಿದ್ದರಿಂದಲೇ ಮತ್ತೊಂದು ದುರಂತಕ್ಕೆ ನಾಂದಿ ಹಾಡಿದಂತೆ ಎಂದು ಸ್ಥಳೀಯರು, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!