ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಈ ಬಾರಿ ಸುರಿದ ಭಾರೀ ಮಳೆಗೆ ಕಾಫಿ, ಮೆಣಸು ಅಡಿಕೆ ನೆಲಕಚ್ಚಿ ಹೋಗಿವೆ. ಹೀಗಾಗಿ ಬೆಳೆಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹಾಗೆ ವಿಪರೀತ ಮಳೆಯಾದ ಕಾರಣ ಕಾಫಿ ಬೆಳೆಗಾರರಿಗೆ ಅತಿವೃಷ್ಠಿ ಪರಿಹಾರ ಮತ್ತು ಯೂರಿಯಾ ಗೊಬ್ಬರ ಸಮರ್ಪಕವಾಗಿ ಪೂರೈಸಬೇಕೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಕೆಜಿಫ್ ಅಧ್ಯಕ್ಷರಾದ ಹಳಸೆ ಶಿವಣ್ಣ,ಉಪಾಧ್ಯಕ್ಷರಾದ ಸಿ. ಸುರೇಶ್, ಸಂಘಟನಾ ಕಾರ್ಯದರ್ಶಿ ಅಶೋಕ್ ಸೂರಪ್ಪನಹಳ್ಳಿ, ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷರಾದ ಕೆ. ಯು ರತೀಶ್, ಪ್ರ. ಕಾರ್ಯದರ್ಶಿ ಕೆರೆಮಕ್ಕಿ ಮಹೇಶ್, ಮೂಡಿಗೆರೆ ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷರಾದ ಬಿ.ಆರ್. ಬಾಲಕೃಷ್ಣ ಉಪಸ್ಥಿತರಿದ್ದರು.
