Friday, February 20, 2026
Homeಕ್ರೈಮ್ಚಿಕ್ಕಮಗಳೂರು: ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಪ್ರತಿಭಟನೆ!

ಚಿಕ್ಕಮಗಳೂರು: ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಪ್ರತಿಭಟನೆ!

ಚಿಕ್ಕಮಗಳೂರು: ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕಡೂರು ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಹೌದು .. ಬಿಜೆಪಿ ಮಾಜಿ ಶಾಸಕ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅಳಿಯ ಸಂದೇಶ್ ಕುಮಾರ್ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಸಂತೋಷ್ ಹಾಗೂ ಸಂಗಡಿಗರು ಸೇರಿ ಮನಸೋ ಇಚ್ಛೆ ಹಲ್ಲೆ ನಡೆಸಿದಕ್ಕೆ ಆರೋಪಿಯನ್ನು ಈ ಕೂಡಲೇ ಬಂಧಿಸುವಂತೆ ಆಗ್ರಹಿಸಿ ರಾತ್ರೋರಾತ್ರಿ ಕಡೂರು ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.

ಕಾರು ಓವರ್‌ಟೇಕ್ ವಿಚಾರವಾಗಿ ಸಂದೇಶ್ – ಸಂತೋಷ್ ನಡುವೆ ಗಲಾಟೆ ನಡೆದಿದ್ದು ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕಡೂರು ಪೊಲೀಸ್ ಠಾಣೆ ಮುಂದೆ ಹಲ್ಲೆ ಖಂಡಿಸಿ, ಬೆಳ್ಳಿ ಪ್ರಕಾಶ್ ಬಿಜೆಪಿ ಕಾರ್ಯಕರ್ತರಿಂದ ಪ್ರೊಟೆಸ್ಟ್ ನಡೆದಿದ್ದು ಹಲ್ಲೆ ಮಾಡಿದವರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆದಿದ್ದು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿ 24 ಗಂಟೆಗಳಲ್ಲಿ ಹಲ್ಲೆ ಮಾಡಿದವನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನ ಕೈಬಿಟ್ಟಿದ್ದಾರೆ.

ಇಂದು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಅವರು ಹಲ್ಲೆಕೋರರನ್ನು ಬಂಧಿಸಿ ಪ್ರತಿಭಟನಾಕಾರರಿಗೆ ನ್ಯಾಯ ಒದಗಿಸುತ್ತಾರಾ ಎಂದು ಕಾದು ನೋಡಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!