ಚಿಕ್ಕಮಗಳೂರು: ಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ ನಡೆಯುತ್ತಿರುವುದರಿಂದ , ಸೀತಾಳಯ್ಯನಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ಪ್ರವಾಸಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿಲಾಗಿದೆ.

ಹೌದು .. ದೇವಸ್ಥಾನಕ್ಕೆ ಅಗತ್ಯವಿರುವ ವಸ್ತುಗಳನ್ನು ಭಾರವಾದ ವಾಹನಗಳನ್ನು ಈ ರಸ್ತೆ ಮೂಲಕ ಸಾಗಿಸುತ್ತಿರುವುದರಿಂದ ರಸ್ಥೆ ಕಿರಿದಾಗಿರುತ್ತದೆ ಹಾಗಾಗಿ ಸುರಕ್ಷತೆಯ ದೃಷ್ಠಿಯಿಂದ ಈ ಕ್ರಮವನ್ನು ಅನುಸರಿಸಲಾಗಿದೆ.
ಫೆ.7ರಿಂದ ಮಾರ್ಚ್ 5ರವರೆಗೆ ಪ್ರವಾಸಿ ಜೀಪ್ ಗಳು ಹಾಗೂ ಸಾರ್ವಜನಿಕ ವಾಹನಗಳ ಓಡಾಟವನ್ನು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನಿಷೇಧಿಸಲಾಗಿದೆ. ಆದ್ದರಿಂದ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಸೀತಾಳಯ್ಯನಗಿರಿಗೆ ಹೋಗುವವರು ಸಹಕರಿಸಬೇಕೆಂದು ಜಿಲ್ಲಾಡಳಿತದ ಮೂಲಕ ಮನವಿಯನ್ನು ಪ್ರಕಟಣೆ ಮೂಲಕ ಹೊರಡಿಸಲಾಗಿದೆ.

