Saturday, August 8, 2026
Homeಕ್ರೈಮ್ಆಲ್ದೂರು: ಹಳೇ ವೈಷಮ್ಯದ ಹಿನ್ನೆಲೆ:ವ್ಯಕ್ತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಆಲ್ದೂರು: ಹಳೇ ವೈಷಮ್ಯದ ಹಿನ್ನೆಲೆ:ವ್ಯಕ್ತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

Telegram Group
Join Now

ಚಿಕ್ಕಮಗಳೂರು: ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ನಡೆದಿದೆ.

ಸುಧಾಕರ್ ಎಂಬುವವರೇ ಮಚ್ಚಿನ ದಾಳಿಗೆ ಒಳಗಾದ ವ್ಯಕ್ತಿ, ಅದೇ ಗ್ರಾಮದ ರವೀಂದ್ರ ಎಂಬಾತ ಈ ಕೃತ್ಯ ಎಸಗಿದ್ದಾನೆ. ಈ ಇಬ್ಬರ ನಡುವೆ ಕಳೆದ ಕೆಲವು ತಿಂಗಳುಗಳಿಂದ ದ್ವೇಷ ಹೊಗೆಯಾಡುತ್ತಿತ್ತು. ಈ ಹಿಂದೆ ನಡೆದಿದ್ದ ಘಟನೆಗೆ ಪ್ರತೀಕಾರವಾಗಿ ಇಂದು ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ​

ಎರಡು ತಿಂಗಳ ಹಿಂದೆ ಸುಧಾಕರ್, ರವೀಂದ್ರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧಾಕರ್, ಒಂದು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದರು. ಜೈಲಿನಿಂದ ಬಂದಿದ್ದ ಸುಧಾಕರ್ ರನ್ನು ಗುರಿಯಾಗಿಸಿಕೊಂಡಿದ್ದ ರವೀಂದ್ರ, ಹಳೇ ದ್ವೇಷವನ್ನು ತೀರಿಸಿಕೊಳ್ಳುವ ಉದ್ದೇಶದಿಂದ ಸುಧಾಕರ್ ಮೇಲೆ ಮಚ್ಚಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಅಂತಾ ಹೇಳಲಾಗ್ತಿದೆ. ​ದಾಳಿಯ ತೀವ್ರತೆಗೆ ಸುಧಾಕರ್ ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸುಧಾಕರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments