Saturday, August 8, 2026
Homeಕ್ರೈಮ್ಚಿಕ್ಕಮಗಳೂರು: ಮರು ಮತ ಎಣಿಕೆ ಹಿನ್ನೆಲೆ: ಐಡಿಎಸ್‌ಜಿ ಕಾಲೇಜು ಸುತ್ತಮುತ್ತ ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು: ಮರು ಮತ ಎಣಿಕೆ ಹಿನ್ನೆಲೆ: ಐಡಿಎಸ್‌ಜಿ ಕಾಲೇಜು ಸುತ್ತಮುತ್ತ ಮದ್ಯ ಮಾರಾಟ ನಿಷೇಧ

Telegram Group
Join Now

ಚಿಕ್ಕಮಗಳೂರು: ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಗೆ ಸಂಬಂಧಿಸಿದಂತೆ ಮರು ಮತ ಎಣಿಕೆ ಕಾರ್ಯ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ರಾತ್ರಿ 11 ಗಂಟೆಯವರೆಗೆ ನಗರದ ಐಡಿಎಸ್‌ಜಿ ಕಾಲೇಜಿನ ಆವರಣದ ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಎಲ್ಲಾ ರೀತಿಯ ಮದ್ಯ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.

ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಗೆ ಸಂಬಂಧಿಸಿದಂತೆ ಮರು ಮತ ಎಣಿಕೆ ಕಾರ್ಯ ಮೇ2 ರಂದು ನಡೆಯಲಿದ್ದು, ಮರು ಮತ ಎಣಿಕೆ ಕಾರ್ಯವು ಸೂಕ್ಷ್ಮತೆಯಿಂದ ಕೂಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಸ್ತಾವನೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಸಿಂಗಟಗೆರೆ ಗ್ರಾಮದ ಶ್ರೀ ರಂಗನಾಥ ವೈನ್ ಶಾಪ್ ಹಾಗೂ ಎಲ್ಲಾ ನಮೂನೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆಯೂ, ಮದ್ಯ, ಬೀಯರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾಥsಗಳ  ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments