Saturday, May 23, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ನಗರಸಭೆ ನೂತನ ಅಧ್ಯಕ್ಷರಾಗಿ ಭವ್ಯ ಮಂಜುನಾಥ್ ಅವಿರೋಧವಾಗಿ ಆಯ್ಕೆ

ಚಿಕ್ಕಮಗಳೂರು: ನಗರಸಭೆ ನೂತನ ಅಧ್ಯಕ್ಷರಾಗಿ ಭವ್ಯ ಮಂಜುನಾಥ್ ಅವಿರೋಧವಾಗಿ ಆಯ್ಕೆ

ಚಿಕ್ಕಮಗಳೂರು: ನಗರಸಭೆ ನೂತನ ಅಧ್ಯಕ್ಷರಾಗಿ 32ನೇ ವಾರ್ಡಿನ ಬಿಜೆಪಿ ಸದಸ್ಯೆ ಭವ್ಯ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರಸಭೆ ಸಭಾಂಗಣದಲ್ಲಿ ಇಂದು ನೆಡೆದ ಅಧ್ಯಕ್ಷರ ಚುನಾವಣೆಗೆ ಭವ್ಯ ಮಂಜುನಾಥ್ ಅವರ ನಾಮಪತ್ರ ಹೊರತುಪಡಿಸಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ನಟೇಶ್ ರವರು ಭವ್ಯ ಮಂಜುನಾಥ್ ಅವರು ನಗರಸಭೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ರವರು ಮಹಿಳಾ ಮೀಸಲಾತಿ ಬಂದಾಗ ೧೦ ತಿಂಗಳಿಗೆ ಒಬ್ಬರಂತೆ ೩ ಅವಧಿ ಹಂಚಿಕೆಯನ್ನು ಬಿಜೆಪಿ ಜೆಡಿಎಸ್ ಕೂಡಿ ಮಾಡಿಕೊಂಡಿದ್ದು, ಮೊದಲ ಅವಧಿಗೆ ಸುಜಾತ ಶಿವಕುಮಾರ್, ೨ ನೇ ಅವಧಿಗೆ ಶೀಲಾದಿನೇಶ್ ಹಾಗೂ ೩ನೇ ಅವಧಿಗೆ ಭವ್ಯ ಮಂಜುನಾಥ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು ಇದಕ್ಕೆ ಸಹಕರಿಸಿದ ಸಂಸದರು, ವಿಧಾನಪರಿಷತ್ ಸದಸ್ಯರು ಹಾಗೂ ಬಿಜೆಪಿಯ ಎಲ್ಲಾ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಹಲವು ಸದಸ್ಯರು ಆಕಾಂಕ್ಷಿಗಳಾಗಿದ್ದರು ಭವ್ಯ ಮಂಜುನಾಥ್ ಹೆಸರು ಪ್ರಸ್ತಾಪವಾದಾಗ ಅವರೆಲ್ಲರು ಸರ್ವಾನುಮತದಿಂದ ಸಹಕರಿಸಿ ಅವಿರೋಧ ಆಯ್ಕೆ ಮಾಡಲು ಕಾರಣಕರ್ತರಾಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ, ನಗರಮಂಡಲ ಅಧ್ಯಕ್ಷ ಕೆ.ಎಸ್ ಪುಷ್ವರಾಜ್, ಮುಖಂಡ ಕೋಟೆ ರಂಗನಾಥ್, ನಗರಸಭೆ ಉಪಾಧ್ಯಕ್ಷೆ ಲಲಿತಾ ರವಿನಾಯಕ್, ಸದಸ್ಯರುಗಳಾದ ರೂಪಕುಮಾರ್, ಕವಿತಾ ಶೇಖರ್, ಸುಜಾತ ಶಿವಕುಮಾರ್, ಶೀಲಾ ದಿನೇಶ್, ಮಧುಕುಮಾರ್ ರಾಜ್ ಅರಸ್, ಎ.ಸಿ ಕುಮಾರ್, ಗೋಪಿ, ವರಸಿದ್ಧಿ ವೇಣುಗೋಪಾಲ್, ಆಯುಕ್ತರಾದ ಬಸವರಾಜ್ ನೂತನ ಅಧ್ಯಕ್ಷರನ್ನು ಅಭಿನಂಧಿಸಿದರು. ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!