ಚಿಕ್ಕಮಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಉಗ್ರಗಾಮಿಗಳಿಗೆ ಹಾಗೂ ಖೈದಿಗಳಿಗೆ ವಿಶೇ? ಸೌಲಭ್ಯ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಯುವಮೋರ್ಚಾ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಯಿತು.
ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ನಗರದ ಅಜಾದ್ ವೃತ್ತದಲ್ಲಿ ಸಮಾವೇಶಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗೃಹಸಚಿವ ಡಾ. ಜಿ. ಪರಮೇಶ್ವರ್‌ರವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪರಪ್ಪನ ಅಗ್ರಹಾರ ಕಾರಗೃಹದಲ್ಲಿ ವಿಕೃತ ಕಾಮಿ ಉಮೇಶ್ ರೆಡ್ಡಿ, ಉಗ್ರಗಾಮಿಗಳು ಸೇರಿದಂತೆ ಅನೇಕ ಖೈದಿಗಳಿಗೆ ಮದ್ಯ, ಮಾಂಸ, ಸ್ಮಾರ್ಟ್ ಮೊಬೈಲ್, ಟಿವಿ, ಮಾದಕ ವಸ್ತುಗಳು ಸೇರಿದಂತೆ ವಿಶೇ? ಸೌಲಭ್ಯ ಒದಗಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋ? ಕೊಟ್ಯಾನ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ದುಡ್ಡೊಂದಿದ್ದರೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೂ ರೆಸಾರ್ಟ್ ರೀತಿಯ ಐ?ರಾಮಿ ಜೀವನ ಸಿಗುತ್ತದೆ ಎನ್ನುವುದಕ್ಕೆ ವೈರಲ್ ಆಗಿರುವ ವೀಡಿಯೊಗಳೇ ಸಾಕ್ಷಿಯಾಗಿದೆ. ನಿಜವಾಗಿಯೂ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆರೋಪಿಸಿದರು.
ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆಯಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್‌ಗೌಡ, ಜಿಲ್ಲಾ ಉಪಾಧ್ಯಕ್ಷೆ ಅಂಕಿತಾ, ಜಿಲ್ಲಾ ಕಾರ್ಯದರ್ಶಿಗಳಾದ ಶಶಿ ಆಲ್ದೂರ್, ರಾಜೇಶ್, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಪು?ರಾಜ್, ಜಿಲ್ಲಾ ಮಹಿಳಾಮೋರ್ಚಾ ಅಧ್ಯಕ್ಷರಾದ ಜಸಂತಾ ಅನಿಲ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
