ಚಿಕ್ಕಮಗಳೂರು:ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್ ಕೋಟೆ ಅವರು ಜನವಸತಿ ಪ್ರದೇಶದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿರುವ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿರುವ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ
ಜೀವನ್ ಕೋಟೆ, ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ನಾಯಕ. ಈತ ಚಿಕ್ಕಮಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜೀವನ್ ಕೋಟೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.
ಆಯುಧ ಪೂಜೆ ಹಿನ್ನೆಲೆ ಮನೆಯ ಮುಂಭಾಗದಲ್ಲಿ ಜನ ವಸತಿ ಪ್ರದೇಶದಲ್ಲಿ ಡಬಲ್ ಬ್ಯಾರಲ್ ಗನ್ ಅದಾಗಿದ್ದು 5 ಸುತ್ತು ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮರೆದ್ದಾರೆ. ಜನರು ಓಡಾಡುವ ಜಾಗದಲ್ಲೇ ಫೈರಿಂಗ್ ಮಾಡಲಾಗಿದೆ. ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಈ ರೀತಿ ಜನರನ್ನು ಭಯ ಬೀಳಿಸೋದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಹಾಗೆ ಕಾನೂನು ಕ್ರಮಕ್ಕೆ ಒತ್ತಾಯ ಕೂಡ ನಡೆದಿದೆ.
