Saturday, August 8, 2026
Homeಕ್ರೈಮ್ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಂಧನ: ಟೌನ್‌ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಂಧನ: ಟೌನ್‌ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ

Telegram Group
Join Now

ಚಿಕ್ಕಮಗಳೂರು: ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರನ್ನು ಟೀಕಿಸಿರುವ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್‌ ಪೊಲೀಸ್‌ ಠಾಣೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಅವರನ್ನು ಬಂಧಿಸಿರುವ ಪೋಲಿಸರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಯಿತು.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿರುವುದನ್ನು ಖಂಡಿಸಿ ಮಂಗಳವಾರ ಚಿಕ್ಕಮಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆಯಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಅವರು ಭಾಷಣ ಮಾಡುವ ವೇಳೆಯಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆಂದು ವಕೀಲರ ಅನಿಲ್‌ಕುಮಾರ್‌ ಅವರು ನೀಡಿರುವ ದೂರಿನನ್ವಯ ಟೌನ್‌ ಪೊಲೀಸರು ಸಂತೋಷ್‌ ಕೋಟ್ಯಾನ್‌ ಅವರನ್ನು ವಶಕ್ಕೆ ಪಡೆದುಕೊಂಡರು.

ಈ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್‌ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments