Tuesday, August 11, 2026
Homeಕ್ರೈಮ್ಚಿಕ್ಕಮಗಳೂರು: ಮದಗದ ಕೆರೆಯಲ್ಲಿ ಯುವಕನ ಶವ ಪತ್ತೆ: ಆತ್ಮಹತ್ಯೆ ಶಂಕೆ!

ಚಿಕ್ಕಮಗಳೂರು: ಮದಗದ ಕೆರೆಯಲ್ಲಿ ಯುವಕನ ಶವ ಪತ್ತೆ: ಆತ್ಮಹತ್ಯೆ ಶಂಕೆ!

Telegram Group
Join Now

ಚಿಕ್ಕಮಗಳೂರು: ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಕಡೂರು ತಾಲೂಕಿನ ಮದಗದ ಕೆರೆಯಲ್ಲಿ ಕಂಡುಬಂದಿದೆ. ಕೆರೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಡೂರು ತಾಲೂಕಿನ ಚಿಕ್ಕಂಗಳ ಸಮೀಪದ ಅಂದೇನಹಳ್ಳಿ ಗ್ರಾಮದ ಉಮೇಶಯ್ಯ ಅವರ ಪುತ್ರ ಚಿನ್ಮಯ್ (23) ಅವರ ಮೃತದೇಹ ಎಮ್ಮೆದೊಡ್ಡಿ ಸಮೀಪದ ಮದಗದ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.

ಚಿನ್ಮಯ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು, ಕಳೆದ ವಾರ ಊರಿಗೆ ಬಂದಿದ್ದರು. ಜನವರಿ 3ರ ಶನಿವಾರ ಅವರು ಮನೆಯಿಂದ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬದವರು ಸುತ್ತಮುತ್ತಲ ಗ್ರಾಮಗಳು ಹಾಗೂ ಸಂಬಂಧಿಕರ ಬಳಿ ವಿಚಾರಣೆ ನಡೆಸಿ ಹುಡುಕಾಟ ನಡೆಸಿದ್ದರು.

ಬುಧವಾರ ಬೆಳಿಗ್ಗೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಚಿನ್ಮಯ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತನ ತಂದೆ ನೀಡಿದ ದೂರಿನ ಆಧಾರದಲ್ಲಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments