Saturday, August 8, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಸಚಿವ ಸಂಪುಟದಿಂದ ಗಾಯಿತ್ರಿ ಶಾಂತೇಗೌಡ ಹೆಸರು ಕೈಬಿಟ್ಟಿದ್ದಕ್ಕೆ ಸಿ.ಟಿ.ರವಿ ಕಿಡಿ!

ಚಿಕ್ಕಮಗಳೂರು: ಸಚಿವ ಸಂಪುಟದಿಂದ ಗಾಯಿತ್ರಿ ಶಾಂತೇಗೌಡ ಹೆಸರು ಕೈಬಿಟ್ಟಿದ್ದಕ್ಕೆ ಸಿ.ಟಿ.ರವಿ ಕಿಡಿ!

Telegram Group
Join Now

ಚಿಕ್ಕಮಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಸ್ಥಾನ ನೀಡದಿರುವುದು ತೀವ್ರ ನಿರಾಸೆ ಮೂಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ.ರವಿ ತಿಳಿಸಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಐದು ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರೂ ಒಬ್ಬರಿಗೂ ಸಚಿವ ಸ್ಥಾನ ನೀಡದಿರುವುದು ಜಿಲ್ಲೆಯ ಜನತೆಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದರು.

ಒಂದು ಕಾಲದಲ್ಲಿ ಮೂರು ಕ್ಯಾಬಿನೆಟ್ ಸಚಿವರು ಹಾಗೂ ಹಲವು ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಹೊಂದಿದ್ದ ನಾಯಕರು ಪ್ರತಿನಿಧಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಗೆ ಇಂದು ಸಚಿವ ಸ್ಥಾನವೇ ಇಲ್ಲದಿರುವುದು ಕಾಂಗ್ರೆಸ್ ಜಿಲ್ಲೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.

ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಸಚಿವರ ಪಟ್ಟಿಯಲ್ಲಿ ಪ್ರಕಟಿಸಿ ಬಳಿಕ ಕೈಬಿಟ್ಟಿರುವುದು ಯಾವುದೇ ರಾಜಕೀಯ ಪಕ್ಷ ಮಾಡಬಾರದ ನಡೆ. ಹೆಸರು ಘೋ?ಣೆ ಮಾಡದೇ ಇದ್ದರೆ ಇಂತಹ ಗೊಂದಲವೇ ಉಂಟಾಗುತ್ತಿರಲಿಲ್ಲ. ಸಾರ್ವಜನಿಕವಾಗಿ ಪ್ರಕಟಿಸಿ ಬಳಿಕ ಅವಕಾಶ ನಿರಾಕರಿಸಿರುವುದು ಅವರಿಗೆ ವೈಯಕ್ತಿಕ ಹಾಗೂ ರಾಜಕೀಯವಾಗಿ ನೋವುಂಟು ಮಾಡುವ ಬೆಳವಣಿಗೆಯಾಗಿದೆ ಎಂದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದನ್ನು ಪ್ರಶ್ನಿಸಿದ ರವಿ ಅವರು, ಮಹಿಳಾ ಸಬಲೀಕರಣದ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ತನ್ನ ಕೃತಿಯಲ್ಲಿ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು “ಮೈ ಲಡ್ಕಿ ಹೂಂ, ಲಡ್ ಸಕ್ತಿ ಹೂಂ” ಎಂದು ಹೇಳುವ ಪ್ರಿಯಾಂಕಾ ಗಾಂಧಿ ಇರುವ ಕಾಂಗ್ರೆಸ್, ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡದಿರುವುದು ಮಾತು ಮತ್ತು ಕೃತಿಯ ನಡುವಿನ ಅಂತರವನ್ನು ತೋರಿಸುತ್ತದೆ ಎಂದು ಹೇಳಿದರು.

ಇದನ್ನು “ಯುವ ಸಚಿವ ಸಂಪುಟ” ಎಂದು ಬಿಂಬಿಸಲಾಗುತ್ತಿದೆ. ಆದರೆ ಸಚಿವರ ಸರಾಸರಿ ವಯಸ್ಸು ೬೧ ವ?ವಾಗಿದ್ದು, ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದೆ ಎಂಬುದು ವಾಸ್ತವಕ್ಕೆ ದೂರವಾಗಿದೆ. ಸಚಿವ ಸ್ಥಾನ ಪಡೆದಿರುವವರು ಹೆಚ್ಚಿನವರು ಹಿರಿಯ ರಾಜಕಾರಣಿಗಳ ಪುತ್ರರು ಹೊರತು ಸ್ವತಂತ್ರವಾಗಿ ನಾಯಕತ್ವ ಬೆಳೆಸಿಕೊಂಡ ಯುವಕರು ಅಲ್ಲ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಉಲ್ಲೇಖ ಮಾಡಿದ ಅವರು, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿದ್ದ ಹಣ ಕಾರು ಶೋರೂಂ, ಆಭರಣ ಮಳಿಗೆ, ವೈನ್ ಶಾಪ್ ಹಾಗೂ ಚುನಾವಣಾ ಚಟುವಟಿಕೆಗಳಿಗೆ ವರ್ಗಾವಣೆಯಾಗಿದೆ ಎಂಬ ಗಂಭೀರ ಆರೋಪಗಳಿರುವ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದು ಭ್ರ?ಚಾರಕ್ಕೆ ಕಾಂಗ್ರೆಸ್ ನೀಡಿರುವ ಬಹುಮಾನವಾಗಿದೆ. ನಾಗೇಂದ್ರ ಅವರಿಗೆ ಯಾವುದೇ ತನಿಖಾ ಸಂಸ್ಥೆ ಕ್ಲೀನ್‌ಚಿಟ್ ನೀಡಿಲ್ಲ. ಸಿಬಿಐ ಅಥವಾ ಇಡಿ ತನಿಖೆ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಚಿಕ್ಕಮಗಳೂರು ಸೇರಿದಂತೆ ಗದಗ, ಯಾದಗಿರಿ, ರಾಯಚೂರು, ವಿಜಯನಗರ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರತಿನಿಧಿತ್ವ ಸಿಗದಿರುವುದರಿಂದ ಪ್ರಾದೇಶಿಕ ಅಸಮತೋಲನ ಮತ್ತ? ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲೇ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸಮಾರಂಭದಿಂದ ದೂರ ಉಳಿದಿರುವುದು, ಹಿರಿಯ ಶಾಸಕರು ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿರುವುದು, ಕೆಲವರು ರಾಜೀನಾಮೆ ಸಲ್ಲಿಸಿರುವುದು ಹಾಗೂ ಪಕ್ಷದ ಕಾರ್ಯಕರ್ತರೇ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವುದು ಸರ್ಕಾರದ ಒಳಗಿನ ಅಸಮಾಧಾನಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿಯವರ ಭಾವಚಿತ್ರದ ಎದುರು ಅವರದೇ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವುದು ಆಡಳಿತದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ. ಈ ಅಸಮಾಧಾನ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯ ಸಂಕ? ತರಬಹುದು ಎಂಬ ಆತಂಕವಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments