ಎನ್ ಆರ್ ಪುರ: ಕಳೆದ ಒಂದುವರೆ ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಕೊನೆಗೂ ಸೋಮವಾರ ಸೆರೆಯಾಗಿದೆ.
ಈ ಭಾಗದಲ್ಲಿ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಉಪಟಳ ನೀಡುತ್ತಿತ್ತು. ವಗಡೆ, ಕಾನೂರು, ಬಾಳೆಹಿತ್ತಲು, ಸಾತ್ವಾನಿ, ಗುಂಡ್ವಾನಿ, ಗುಬ್ಬಿಗಾ, ಹೊರಬೈಲು, ನೇರ್ಲೆ, ಗೋಣಿಕೊಪ್ಪ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಈ ಸಲಗವು ನಿರಂತರವಾಗಿ ಬೆಳೆ ಹಾನಿ ಮಾಡುತ್ತಿತ್ತು. ಇದರಿಂದ ರೈತರ ತೋಟಗಳಿಗೆ ಅಪಾರ ನಷ್ಟ ಉಂಟಾಗಿತ್ತು
ಸೆರೆ ಹಿಡದ ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗಿದೆ. ಕೊನೆಗೂ ಆನೆ ಸೆರೆಯಾಗಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
\
