Tuesday, July 14, 2026
Homeಕ್ರೈಮ್ಚಿಕ್ಕಮಗಳೂರು: ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ :‌ ನಾಲ್ವರು ಕಾರ್ಯಕರ್ತರ ಮೇಲೆ‌ FIR

ಚಿಕ್ಕಮಗಳೂರು: ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ :‌ ನಾಲ್ವರು ಕಾರ್ಯಕರ್ತರ ಮೇಲೆ‌ FIR

Telegram Group
Join Now

ಚಿಕ್ಕಮಗಳೂರು ನಗರದಲ್ಲಿ ರಾಜಕೀಯ ಮುಖಂಡರ ಬೆಂಬಲಿಗರ ನಡುವಿನ ಪ್ರತಿಷ್ಠೆಯ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಚಿವ ಸಿ.ಟಿ. ರವಿ ಹಾಗೂ ಶಾಸಕ ಎಚ್.ಡಿ. ತಮ್ಮಯ್ಯ ಅವರ ಬೆಂಬಲಿಗರು ಸಾರ್ವಜನಿಕ ರಸ್ತೆಯಲ್ಲೇ ಪರಸ್ಪರ ಹೊಡೆದಾಟ ನಡೆಸಿದ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೌದು ..ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಆರೋಪದ ಅಡಿಯಲ್ಲಿ ಪೊಲೀಸರು ಒಟ್ಟು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಪೈಕಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಸೇರಿದಂತೆ ರಾಜೇಶ್ ಹಾಗೂ ಹೇಮಂತ್ ಎಂಬುವವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಘಟನಾ ಸ್ಥಳದಲ್ಲಿದ್ದ ನಗರ ಪೊಲೀಸ್ ಠಾಣೆಯ ಮುಖ್ಯ ಪೇದೆ ಪ್ರವೀಣ್ ಕುಮಾರ್ ಅವರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಈ ಕಾನೂನು ಕ್ರಮ ಜರುಗಿಸಲಾಗಿದೆ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಈ ಹಲ್ಲೆ ಮತ್ತು ಗದ್ದಲದ ದೃಶ್ಯಗಳು ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ತಡೆಯಲು ಪೊಲೀಸರು ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments