Wednesday, March 18, 2026
Homeಕ್ರೈಮ್ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮ!

ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮ!

ಚಿಕ್ಕಮಗಳೂರು: ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಆಲ್ದೂರು ಪೊಲೀಸ್ ಠಾಣೆ ಪಿಎಸ್ಐ ಅವರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು.

ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು, ಸೈಬರ್ ಅಪರಾಧಗಳು, ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಿದರು.

ಇದಲ್ಲದೇ ಹಾಗೆ ಈ ಕಾರ್ಯಕ್ರಮದಲ್ಲಿ ಪಿಎಸ್ಐ ಅವರು ಮಾದಕ ವಸ್ತುಗಳ ಸೇವನೆಯಿಂದಾಗುವ ಗಂಭೀರ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು. ಯುವ ಜನರು ಇಂಥ ವ್ಯವಸ್ಥೆಗಳಿಂದ ದೂರವಿರಬೇಕು ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಅಲ್ಲದೆ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ಈ ಕಾನೂನುಗಳ ಮಹತ್ವ ಅವುಗಳ ಅಡಿಯಲ್ಲಿ ಸಿಗುವ ರಕ್ಷಣೆಗಳು ಹಾಗೂ ಕಾನೂನು ನೆರವು ಪಡೆಯುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!