ಚಿಕ್ಕಮಗಳೂರು: ಜನವರಿ 12 ರಂದು ನಡೆಯುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂಪಡೆಯುವ ದಿನದ ಅವಧಿ ಹಾಗೂ ಚುನಾವಣಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪ್ಟಕಟಣೆ ದಿನದ ಸಮಯವನ್ನು ವಿಸ್ತರಿಸಿ ಡಿಸಿಸಿ ಬ್ಯಾಂಕ್ ಚುನಾವಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ
ನಾಮಪತ್ರ ಹಿಂಪಡೆಯಲು ಜ.11ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಇದ್ದ ಅವಧಿಯನ್ನು 3 ಗಂಟೆಯವರೆಗೆ ವಿಸ್ತರಿಸಲಾಗಿದ್ದರೆ, ಚುನಾವಣಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ 11 ರಂದು ಮಧ್ಯಾಹ್ನ 3 ಗಂಟೆಯ ನಂತರ ಪ್ರಕಟಿಸಲಾಗುವುದು.
ಈ ಮೊದಲು ಅಂದು ಮಧ್ಯಾಹ್ನ 2 ಗಂಟೆಯ ನಂತರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ
