ಚಿಕ್ಕಮಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ವಿದ್ಯಾರ್ಥಿಗಳಿಂದ ನಗರದ AIT ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಹೌದು .. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕಮಗಳೂರು ಜಿಲ್ಲಾ ವತಿಯಿಂದ ನಗರದ AIT ಸರ್ಕಲ್ ನಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ದಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಶೀಘ್ರದಲ್ಲೇ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರನ್ನು ಹಾಕಬೇಕು. ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸಬೇಕೆಂದು ಪ್ರತಿಭಟನೆ ಮೂಲಕ ತಮ್ಮ ಮನವಿಯನ್ನು ತಿಳಿಸಿದರು.
ಈ ವೇಳೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
