Thursday, March 26, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ದೇವೀರಮ್ಮ ಜಾತ್ರೆ : ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಚಿಕ್ಕಮಗಳೂರು: ದೇವೀರಮ್ಮ ಜಾತ್ರೆ : ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಚಿಕ್ಕಮಗಳೂರು: ತಾಲೂಕಿನ ಬಿಂಡಿಗ ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಅಕ್ಟೋಬರ್ 23 ರವರೆಗೆ ನಡೆಯಲಿವೆ, ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಸಂಪೂರ್ಣ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಕಾರ್ಯಕ್ರಮ.

ಅವರು ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಬಾರಿ ಎರಡು ದಿನಗಳ ಕಾಲ ಬೆಟ್ಟ ಹತ್ತಲು ಅವಕಾಶ ನೀಡಲಾಗಿದೆ ಎಂದು ಹೇಳಿ ದೀಪಾವಳಿಯ ಮೊದಲ ದಿನ ಅಕ್ಟೋಬರ್ ೧೯ ರಂದು ನರಕ ಚತುರ್ದಶಿ ಅಂಗವಾಗಿ ಬೆಳಿಗ್ಗೆ ೯ ಗಂಟೆಯಿಂದ ಸಂಜೆ 5 ರವರೆಗೆ ಭಕ್ತರು ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯಬಹುದು, ಮರುದಿನ ಅಕ್ಟೋಬರ್ 20 ರಂದು ಬೆಳಿಗ್ಗೆ 8 ರಿಂದ ಸಂಜೆ 3 ವರೆಗೆ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.

ಅ.18 ಮತ್ತು 18 ರಂದು ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಿಲ್ಲ ಬೆಟ್ಟ ಹತ್ತುವ ಭಕ್ತಾಧಿಗಳಿಗೆ ದಾರಿಯಲ್ಲಿ ಯಾವುದಾದರೂ ಆಕೃತಿಯಾಗದಂತೆ ಭೂಮಿಯಲ್ಲಿ ನಡೆಯುವ ಭಾಗದಲ್ಲಿ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ ವಹಿಸಲಾಗಿದೆ.
ಜನದಟ್ಟಣೆ ನಿಯಂತ್ರಣ ಮಾಡುವ ಸಲುವಾಗಿ ದೇವಸ್ಥಾನ ಸಮಿತಿಗಳು ಕಡ್ಡಾಯವಾಗಿ ಪಾಲಿಸುವಂತೆ ಭಕ್ತಾಧಿಗಳಿಗೆ ಸೂಚನೆ ಫಲಕವನ್ನು ನೀಡುವ ಬೆಟ್ಟದಲ್ಲಿ ಅಳವಡಿಸಲಾಗಿದೆ, ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿರುವುದು ಡ್ರೋನ್ ಸರ್ವೆ ಮತ್ತು ಸಿಸಿ ಕ್ಯಾಮೆರಾದಲ್ಲಿ ಪತ್ತೆಯಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಬಾರಿ ರಾತ್ರಿ ವೇಳೆ ಬೆಟ್ಟ ಹತ್ತಲು ಅವಕಾಶವಿಲ್ಲ ಎಂದ ಅವರು, ಗಿರಿ ಪ್ರದೇಶದಲ್ಲಿ ತುಂಬಾ ಮಲೆಯಾಗುತ್ತಿರುವ ಜಾರಿಕೆ ಇದೆ. ರಾತ್ರಿ ವೇಳೆ ಬೆಟ್ಟ ಹತ್ತುವುದು ಅಪಾಯಕಾರಿಯಾಗಿದೆ. ಅದರಲ್ಲೂ ಮಹಿಳೆಯರಿಗೆ ಹೆಚ್ಚು ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ರಾತ್ರಿ ಬೆಟ್ಟ ಹತ್ತಲು ಅವಕಾಶ ಇರುವುದಿಲ್ಲ.

15 ವರ್ಷದ ಒಳಗಿನ ಮಕ್ಕಳು, 60 ವರ್ಷ ಮೇಲ್ಪಟ್ಟವರು ಮತ್ತು ಆರೋಗ್ಯದ ಸಮಸ್ಯೆ ಇರುವವರು ಬೆಟ್ಟ ಹತ್ತುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಸಮಾಲೋಚಿಸಿ ತೀರ್ಮಾನಕ್ಕೆ ಬರಲಾಗಿದೆ ಅಲ್ಲಾ ಕ್ರಮಗಳು ಭಕ್ತರ ಹಿತದೃಷ್ಟಿಯಿಂದ ಜಾರಿಗೆ ತರಲಾಗುತ್ತಿದೆ.
ಭಕ್ತರ ನೂಕು ನುಗ್ಗಲು ತಪ್ಪಿಸಿ ಎಲ್ಲರಿಗೂ ದೇವಿ ದರ್ಶನ ಸುಗಮವಾಗಲಿ ಎಂಬ ಕಾರಣಕ್ಕೆ ಎರಡು ದಿನಗಳ ಕಾಲ ಬೆಟ್ಟ ಹತ್ತಲು ಅವಕಾಶ ನೀಡಲಾಗುತ್ತಿಲ್ಲ. ಈ ಕಾರಣಕ್ಕೆ ಭಕ್ತರು ರಾತ್ರಿ ವೇಳೆ ಬೆಟ್ಟದ ದೇವಸ್ಥಾನ ಸಮತಿ ಮತ್ತು ಬೇಡಿಕೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!