Wednesday, March 4, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಛಾಟನೆ!

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಛಾಟನೆ!

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಈ ಕುರಿತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಹಿಲ್ ಶರೀಫ್ ಅವರು ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದವು.

ಈ ವರ್ತನೆಗಳ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ಪರಿಗಣಿಸಲಾಗಿದೆ. ಇಂತಹ ನಡವಳಿಕೆಗಳಿಂದ ಕಾಂಗ್ರೆಸ್ ಪಕ್ಷ ಮತ್ತು ಸಂಘಟನೆಗೆ ಮುಜುಗರ ಉಂಟಾಗಿರುವ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಂಶುಮಂತ್ ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!